kenduli
portal

ಮಂಡ್ಯ ದ ಅಭಿವೃದ್ಧಿ ಕೇಂದ್ರದ ಸಹಕಾರ ಬೇಕಿದೆ- ಸುಮಲತ

28

ಬೆಂಗಳೂರು: ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯ ಪ್ರಭಾವಿ ನಾಯಕರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮುಂದುವರಿಸಿದ್ದಾರೆ.

ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಸುಮಲತ  ಇಂದು ಭೇಟಿನೀಡಿದರು   ಅವರನ್ನು ಬಿ.ಎಲ್.ಸಂತೋಷ್ ಹಾಗೂ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕಚೇರಿಯ ವಿಐಪಿ ಕೊಠಡಿಯಲ್ಲಿ ಬಿ.ಎಲ್ ಸಂತೋಷ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಜೊತೆ ಸುಮಲತಾ ಅಂಬರೀಷ್ ಸುಮಾರು ಒಂದು ಗಂಟೆ ಕಾಲ ಚರ್ಚೆ ನಡೆಸಿದರು. ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಸುಮಲತ ನನಗೆ ಬಿಜೆಪಿ ಪಕ್ಷ ಬೆಂಬಲಿಸಿತ್ತು ಅದರಿಂದ ಕೃತಙ್ಞತೆ ತಿಳಿಸಲು ಬಂದಿದ್ದೇನೆ, ಮಂಡ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರ ಜೊತೆ  ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

ಬಾಹ್ಯ ಬೆಂಬಲ ನೀಡುವಂತೆ ಬಿಜೆಪಿ ನಾಯಕರು ಕೇಳಿಕೊಂಡಿಲ್ಲ ಹಾಗೂ ಈ ಕುರಿತು ಯಾವುದೇ ಚರ್ಚೆಯಾಗಿಲ್ಲ.  ಬಿಜೆಪಿಗೆ ಬಾಹ್ಯ ಬೆಂಬಲ ದ ಅವಶ್ಯಕತೆ ಬರುವುದಿಲ್ಲ ಅವರದೆ ಸದಸ್ಯರು ಇದ್ದಾರೆ. ಸಂಸದೆ ಸುಮಲತಾ ಅವರು ಮಾಜಿ ಸಿಎಂ ಎಸ್.ಎಂ.ಕೃಷ್ಣ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಇತ್ತೀಚೆಗಷ್ಟೇ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಇಂದು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ

Comments are closed.