kenduli
portal

ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿದ ಸಿಎಂ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚೆ

39

ಬೆಂಗಳೂರು, ಜೂನ್ 15- ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವ ಬಗ್ಗೆ ಸಂಬಂಧಿಸಿದ ರಾಜ್ಯಗಳೊಂದಿಗೆ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿಳಿಸಿದರು. ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.

ಈ ಸಂದರ್ಭದಲ್ಲಿ ಅವರು ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಹಾಗೂ ಕೃಷ್ಣಾ ನ್ಯಾಯಾಧಿಕಾರಣದ ಆದೇಶ ಹಾಗೂ ಮಹದಾಯಿ ನ್ಯಾಯಾಧಿಕರಣದ ಆದೇಶಗಳ ಗಜೆಟ್ ಅಧಿಸೂಚನೆ ಹೊರಡಿಸಿ, ಶೀಘ್ರವೇ ಈ ಯೋಜನೆಗಳ ಅನುಷ್ಠಾನಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು. ಕಾವೇರಿ ಜಲ ವಿವಾದ ನ್ಯಾಯಾಧಿಕರಣದ ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಯಾಲಯದಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳು ಪ್ರಕರಣಗಳನ್ನು ದಾಖಲಿಸಿದ್ದಾಗ್ಯೂ, ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಡುವ ಷರತ್ತು ವಿಧಿಸಿ, ಗಜೆಟ್ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ರೀತಿ ಕೃಷ್ಣಾ ಹಾಗೂ ಮಹದಾಯಿ ನ್ಯಾಯಾಧಿಕರಣಗಳ ನೀರು ಹಂಚಿಕೆ ಕುರಿತಂತೆ ನ್ಯಾಯಾಲಯದ ತೀರ್ಪು ನಿರೀಕ್ಷಿಸಿ, ಗಜೆಟ್ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು.

Comments are closed.